ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ. ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಇನಿಂಗ್ಸ್ನ ಹೊರತಾಗಿಯೂ ಫೈನಲ್ ಪಂದ್ಯದಲ್ಲಿ ಬೌಲರ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
Rahul Dravid: ರಾಹುಲ್ ದ್ರಾವಿಡ್ʼರವರ ವಿದಾಯದ ಭಾಷಣದ ಹೈಲೆಟ್ಸ್ ನೋಡೋಣ!
ನನ್ನ ಪ್ರಕಾರ, ಅಂತಿಮ ಪಂದ್ಯದಲ್ಲಿ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಅವಾರ್ಡ್ಗೆ ಅರ್ಹರಾಗಿರಲಿಲ್ಲ. ಇದಾಗ್ಯೂ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಆದರೆ ಈ ಪಂದ್ಯದಲ್ಲಿ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಪ್ರಶಸ್ತಿ ಬೌಲರ್ಗೆ ಸಲ್ಲಬೇಕಿತ್ತು ಎಂದು ಮಂಜ್ರೇಕರ್ ಹೇಳಿದ್ದಾರೆ.
ಅಲ್ಲದೆ ಸೋಲಿನ ದವಡೆಯಿಂದ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟರು. ಇಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್ಗಿಂತ, ಭಾರತೀಯ ಬೌಲರ್ಗಳ ಪ್ರದರ್ಶನ ಮೇಲ್ಮಟ್ಟದಲ್ಲಿದೆ. ಹೀಗಾಗಿ ಬೌಲರ್ಗಳು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.
ಹಾರ್ದಿಕ್ ಪಾಂಡ್ಯ ಎರಡನೇ ಇನ್ನಿಂಗ್ಸ್ನಲ್ಲಿ ಮೂರು ನಿರ್ಣಾಯಕ ವಿಕೆಟ್ಗಳನ್ನು ಪಡೆದಿದ್ದರು. ಹಾಗೆಯೇ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಲಾ ಎರಡು ವಿಕೆಟ್ ಕಬಳಿಸಿದ್ದರು. ಹೀಗಾಗಿ ಇವರಲ್ಲಿ ಒಬ್ಬರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಮಂಜ್ರೇಕರ್ ಹೇಳಿದ್ದಾರೆ.