ಲಕ್ನೋ:- ಹತ್ರಾಸ್ ದುರಂತಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಪರಿಹಾರದ ಮೊತ್ತ ಹೆಚ್ಚಿಸಿದ್ದಾರೆ.
“ಅಮ್ಮಾ ಪ್ಲೀಸ್ ಬೇಡ” ಎಂದೂ ಬೇಡಿಕೊಂಡರೂ ಬೆಲ್ಟ್ ನಿಂದ ಮಕ್ಕಳನ್ನು ಹೊಡೆದು ಥಳಿಸಿದ ತಾಯಿ!
ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ಭಕ್ತರ ರಕ್ಷಣೆ ಮತ್ತು ಸುರಕ್ಷತೆಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 121 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಯುಪಿ, ಹರಿಯಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಭಕ್ತರು ಈ ಕಾರ್ಯಕ್ರಮಕ್ಕೆ ಬಂದಿದ್ದರು. ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.
ನಾನು ಹಲವಾರು ಪ್ರತ್ಯಕ್ಷದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕಾರ್ಯಕ್ರಮ ಮುಗಿದ ನಂತರ ಸತ್ಸಂಗದ ಪ್ರಚಾರಕರು ಬರುತ್ತಿದ್ದಾಗ ಘಟನೆ ನಡೆದಿದೆ ಎಂದು ತಿಳುದುಬಂದಿದೆ. ವೇದಿಕೆಯಿಂದ ಕೆಳಗೆ ಬಾಬಾ ಇಳಿಯುತ್ತಿದ್ದಂತೆ, ಹಲವಾರು ಮಹಿಳೆಯರು ಅವರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಅವರನ್ನು ತಡೆಯುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಸಿಎಂ ವಿವರಿಸಿದರು
ಸದ್ಯ ಆಗ್ರಾ ಎಡಿಜಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದ್ದೇವೆ. ಈ ತಂಡ ಪ್ರಾಥಮಿಕ ವರದಿ ಸಲ್ಲಿಸಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಅಲ್ಲದೆ ರಾಜ್ಯ ಸರ್ಕಾರವು ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಿದೆ. ಇದರ ನೇತೃತ್ವವನ್ನು ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರು ವಹಿಸಲಿದ್ದಾರೆ ಎಂದರು.