ಬೆಂಗಳೂರು: ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಇನ್ನು ಕೆಲವಡೆ ಮೋಡಗಳ ಮಧ್ಯೆ ಸೂರ್ಯ ಇಣುಕುತ್ತಿದ್ದಾನೆ.
ಕರ್ನಾಟಕದ ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಈ ವಾರ ಪೂರ್ತಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ ಧಾರವಾಡ ಜಿಲ್ಲೆಗಳಿಗೂ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
Namma Metro Alert: ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳ: ಹೈ ಅಲರ್ಟ್ ಆದ ನಮ್ಮ ಮೆಟ್ರೋ!
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
* ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆ ಮತ್ತು ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
* ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಗಾಳಿಯ ವೇಗವನ್ನು ತಲುಪುವ (30-40 kmph) ಗಾಳಿಯ ನಿರಂತರ ಗಾಳಿಯು ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ ಮತ್ತು ಸಾಧಾರಣ ಮಳೆ/ಗುಡುಗು ಸಹಿತ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಉತ್ತರ ಒಳ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಂಭವಿಸುತ್ತದೆ.