ಬೆಂಗಳೂರು : ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ.ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಎಂದು ಗೊತ್ತಾಗಿದೆ.
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೊಮ್ಮಸಂದ್ರ ಹೋಗುವವರಿಗೆ ಇನ್ಮುಂದೆ ಬಲು ಸುಲಭ!
ಇನ್ನು ಮೈಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ದತವಾಗಿದ್ದು ಪೊಲೀಸರು ಇದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀನಲೆ ನಡೆಸಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಜೆ ಕಗೊಂಡಿದ್ದು, ಇಲ್ಲಿಗೆ ಶವ ತಂದು ಹಾಕಿದವರು ಯಾರು ಎನ್ನುವುದನ್ನು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.