ಬೆಂಗಳೂರು: ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸತ್ಕಾರ ನೀಡುತ್ತಿಲ್ಲ. ದರ್ಶನ್’ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ. ಬೇಕಾದರೆ ನನ್ನ ಜತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸವಾಲು ಹಾಕಿದರು.
ಮಾತನಾಡಿದ ಅವರು, ” ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಈ ರೀತಿಯಲ್ಲಿ ಸ್ಪಷ್ಟೀಕರಣ ನೀಡಿದರು. ದರ್ಶನ್ಗೆ ಜೈಲಿನಲ್ಲಿ ಏನೂ ವಿಶೇಷ ಸೌಲಭ್ಯ ಕೊಡುತ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ ಎಂದು ಅವರು ಆರೋಪವನ್ನು ನಿರಾಕರಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಬದಲಾವಣೆ ವಿಚಾರ ಕುರಿತು ಇದೇ ಸಂದರ್ಭದಲ್ಲಿ ಮಾತನಾಡಿದ ಅವರು,
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
” ನಾನು ಸಿಎಂ ಅವರನ್ನು ಪ್ರತಿದಿನ ಭೇಟಿ ಮಾಡುತ್ತೇನೆ. ಇಲಾಖೆಯ ಅನೇಕ ವಿಚಾರಗಳನ್ನು ಅವರ ಗಮನಕ್ಕೆ ತಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸರ್ಕಾರದಲ್ಲಿ ಅನೇಕ ತೀರ್ಮಾನಗಳನ್ನು ಮಾಡುವಂತಹ ಸಂದರ್ಭದಲ್ಲಿ ಅವರೊಂದಿಗೆ ಚರ್ಚಿಸಬೇಕಾಗುತ್ತದೆ ” ಎಂದು ಹೇಳಿದರು.