ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಸಬೇಕು. ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಸ್ಥಳೀಯವಾಗಿ ಬೀಜೋತ್ಪಾದನೆ ಮಾಡಿ ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಬಿತ್ತನೆ ಬೀಜ, ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಗೊಂದಲ ಇಲ್ಲದಂತೆ ವಿತರಣೆ ಮಾಡಿ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ತಿಳಿಸಿದರು. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಬೇಕು. ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ನೋಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಿ ಎಂದು ಸೂಚಿಸಿದರು.