ಮೈಸೂರು: ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ರಾಜ್ಯದಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಅಧಿಕೃತವಾಗಿ ಡೆಂಗ್ಯೂ ಜ್ವರಕ್ಕೆ ಆರೋಗ್ಯಾಧಿಕಾರಿ ಬಲಿಯಾಗಿದ್ದಾರೆ. 35 ವರ್ಷದ ನಾಗೇಂದ್ರ ಡೆಂಗ್ಯೂವಿಗೆ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದ್ದು, ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯಾಗಿದ್ದರು.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಕಳೆದ ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇವರು ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದರು.