ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.
Divorce Case: ಯುವ ರಾಜ್ಕುಮಾರ್ ಡಿವೋರ್ಸ್ ಕೇಸ್: ಆಗಸ್ಟ್ 23ಕ್ಕೆ ಮುಂದೂಡಿದ ಕೋರ್ಟ್!
ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರ, ಕೋಟ, ಆಗುಂಬೆ, ಧರ್ಮಸ್ಥಳ, ಉಡುಪಿ, ಲಿಂಗನಮಕ್ಕಿಯಲ್ಲಿ ಹೆಚ್ಚು ಮಳೆಯಾಗಿದೆ.
Bangalore Train: ಬೆಂಗಳೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು ಮಾರ್ಗದಲ್ಲಿ ಬದಲಾವಣೆ!
ನಿನ್ನೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿತ್ತು. ಜಿಲ್ಲೆಯ ನದಿ, ತೊರೆ, ಕೆರೆ, ಹಳ್ಳಗಳು ತುಂಬಿ ತುಳುಕುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಪ್ರವಾಹ ಉಂಟಾಗುವ ಸಾಧ್ಯತೆಯೂ ಇದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಂಟ್ವಾಕ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ರಜೆ ಘೋಷಿಸಿದ್ದಾರೆ