ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18ರವರೆಗೆ ದರ್ಶನ್ ನಟಿ ಪವಿತ್ರಾ ಗೌಡ ಸೇರಿ ಎಲ್ಲರಿಗೂ ನ್ಯಾಯಾಂಗ ಬಂಧನವಾಗಿದೆ.
Renukaswamy Murder Case: ನನ್ನ ಹೃದಯ ಛಿದ್ರವಾಗಿದೆ: ದರ್ಶನ್ ಬಂಧನದ ಬಗ್ಗೆ ಮೌನ ಮುರಿದ ಸುಮಲತಾ
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು
ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.