ಟಿ20 ವಿಶ್ವಕಪ್ (T20 World Cup) ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ (Team India) ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ. ಬಳಿಕ ಆಟಗಾರರ ಜೊತೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಟೀಮ್ ಇಂಡಿಯಾ ಆಟಗಾರರ ಜೊತೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಧಾನಿ ಮೋದಿ ಜೊತೆ ಸಿಂಗಲ್ ಫೋಟೋ ತೆಗೆಸಿಕೊಂಡರು. ಇದೇ ವೇಳೆ ವಿಶ್ವಕಪ್ನಲ್ಲಿ ಭಾರತವನ್ನು ಯಶಸ್ವಿಯಾಗಿ ಮುನ್ನಡೆಸಿದ ಹಿಟ್ಮ್ಯಾನ್ ಅವರ ನಾಯಕತ್ವವನ್ನು ಪ್ರಧಾನಿ ಹಾಡಿಹೊಗಳಿದ್ದಾರೆ.
ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ವಿಶೇಷ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೊಹ್ಲಿ, ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾದದ್ದು ದೊಡ್ಡ ಗೌರವ ಎಂದು ಬರೆದುಕೊಂಡಿದ್ದಾರೆ.
ಈ ಭೇಟಿ ವೇಳೆ ಜಸ್ಪ್ರೀತ್ ಬುಮ್ರಾ ಅವರ ಪತ್ನಿ ಮತ್ತು ಪುತ್ರ ಅಂಗದ್ ಕಾಣಿಸಿಕೊಂಡಿದ್ದರು. ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನ ಆ್ಯಂಕರ್ ಆಗಿರುವ ಬುಮ್ರಾ ಪತ್ನಿ ಸಂಜನಾ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಕಾರ್ಯ ನಿರ್ವಹಿಸಿದ್ದರು.
ಟೀಮ್ ಇಂಡಿಯಾ ಅರ್ಷದೀಪ್ ಸಿಂಗ್ ಅವರ ಪೋಷಕರು ಕೂಡ ಭಾರತ ತಂಡದ ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಅರ್ಷದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಇದೇ ವೇಳೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಹಾಗೆಯೇ ಫೈನಲ್ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಷಾ ಶೆಟ್ಟಿ ಜೊತೆ ಪ್ರಧಾನಿ ಮೋದಿ ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.