ಉತ್ತರ ಕನ್ನಡ: ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು. ಇದೀಗ ಡೆಂಗ್ಯು ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ. ಹರೇರಾಮ್ ಗೋಪಾಲ್ ಭಟ್ ಎಂಬುವವರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹರೇರಾಮ್ ಗೋಪಾಲ್ ಭಟ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಹರೇರಾಮ್ ಗೋಪಾಲ್ ಭಟ್(32) ಅಂಕೊಲಾ ತಾಲೂಕಿನ ಬಾವಿಕೆರೆ ನಿವಾಸಿಯಾಗಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಒಂದುವಾರದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಹರೇರಾಮ್ ಭಟ್ ಸಾವನ್ನಪ್ಪಿದ್ದು, ಡೆಂಘೀ ಮಹಾಮಾರಿಯಿಂದ ಸಾವನ್ನಪ್ಪಿದ್ದಾಗಿ ದೃಢಪಟ್ಟಿದೆ.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಡೆಂಗ್ಯೂವಿನಿಂದ ಸಾವು ದಾಖಲಾದ ಹಿನ್ನೆಲೆಯಲ್ಲಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಮನೆಯ ಸುತ್ತ ಮುತ್ತ ಮಳೆ ನೀರು ನಿಲ್ಲದಂತೆ ಸ್ವಚ್ಛತೆ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅದಲ್ಲದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ 119 ಜನರಲ್ಲಿ ಡೆಂಗ್ಯು ಪತ್ತೆಯಾಗಿದೆ.