ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಹಾಗೂ ಸರಿಯಾಗಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಂದಿಲ್ಲ,
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಸರಿಯಾದ ಬಸ್ ಸೌಲಭ್ಯ ಹಾಗೂ ಹಾಸ್ಟೆಲ್ ಸೌಲಭ್ಯ ಇಲ್ಲದೇ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು ರಾಜ್ಯ ಸರ್ಕಾರದ ವಿರುಧ್ಧ ಘೋಷಣೆ ಕೂಗುತ್ತ ಕೂಡಲೇ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು.ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಎಚ್ಚರಿಕೆ ನೀಡಿದರು.