ಉಡುಪಿ:- ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಎರಡು ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.
ಮಳೆ ಆರ್ಭಟ: ಉತ್ತರ ಕನ್ನಡದಲ್ಲಿ 6 ಕಾಳಜಿ ಕೇಂದ್ರ ಓಪನ್; ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ!
ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.