ನವದೆಹಲಿ:– ಮಂಗಳಮುಖಿಯೊಬ್ಬರು 10 ರೂ.ಗಾಗಿ ಎಲ್ಲರ ಮುಂದೆಯೇ ಪ್ಯಾಂಟ್ ಬಿಚ್ಚಿಕೊಂಡು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್ ಆಗಿದೆ.
ಶೀಘ್ರ ದೇಹದ ತೂಕ ಕಡಿಮೆ ಆಗ್ಬೇಕಾ!?, ಈ ಅಭ್ಯಾಸಗಳನ್ನು ಇಂದೇ ರೂಢಿಸಿಕೊಳ್ಳಿ!
ವ್ಯಕ್ತಿಯು ಇ-ರಿಕ್ಷಾವನ್ನು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಈತನ ರಿಕ್ಷಾವನ್ನು ಮಂಗಳಮುಖಿ ಹತ್ತಿದ್ದಾರೆ. ಮಂಗಳಮುಖಿಯು ಇಳಿಯುವಾಗ ಎಂದಿನಂತೆ ಇ-ರಿಕ್ಷಾ ಚಾಲಕನು 10 ರೂ. ಬಾಡಿಗೆ ಕೊಡಿ ಎಂದಿದ್ದಾನೆ. ಇದರಿಂದ ಕುಪಿತಗೊಂಡ ಮಹಿಳೆಯು ಆತನ ಜತೆ ಜಗಳಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಬಾಡಿಗೆ ಕೊಡುವುದಿಲ್ಲ ಎಂದು ಹೇಳುವ ಜತೆಗೆ ಬೈದಿದ್ದಾರೆ. ಇದಾದ ನಂತರ ಆಟೋ ಚಾಲಕನು ಕೂಡ ಗದರಿದ್ದಾನೆ. ಆಗ ಮಂಗಳಮುಖಿಯ ಕೋಪ ದ್ವಿಗುಣಗೊಂಡಿದೆ. ಕೂಡಲೇ ಆಟೋ ಚಾಲಕನ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯು ಎಲ್ಲಿ ನಡೆದಿದೆ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ
-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಪ್ಯಾಂಟ್ ಬಿಚ್ಚಿ ಬೆತ್ತಲೆಯಾದ ಬಳಿಕವೂ ಅವರು ಮತ್ತೆ ಚಾಲಕನ ಮೇಳೆ ಹಲ್ಲೆ ನಡೆಸಿದ್ದಾರೆ. ಕೇವಲ 10 ರೂ.ಗಾಗಿ ಇಬ್ಬರೂ ರಸ್ತೆ ಮಧ್ಯೆ ಕಾದಾಡಿಕೊಂಡಿರುವ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.