ಬೆಂಗಳೂರು:– ಕರ್ನಾಟಕದ ಹಲವೆಡೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಸ್ಸಾಂನಲ್ಲಿ ಭೀಕರ ಪ್ರವಾಹ: ನೀರಿನಲ್ಲಿ ಸಿಲುಕಿದ್ದ ಕರು ಕಾಪಾಡಿದ ವ್ಯಕ್ತಿ!
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.