ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾರ್ವಾ ಉತ್ಪತ್ತಿಯಾಗದಂತೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರೂ ನಿರ್ಲಕ್ಷ್ಯ ವಹಿಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ದರ್ಶನ್ & ಗ್ಯಾಂಗ್ʼನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಪೊಲೀಸರಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ!!
ಬೆಂಗಳೂರಿನಲ್ಲಿ ಈವರೆಗೆ 2,500ಕ್ಕೂ ಅಧಿಕ ಡೆಂಘೀ ಪ್ರಕರಣ ದೃಢಪಟ್ಟಿದ್ದು, ಒಬ್ಬರು ಡೆಂಘೀಯಿಂದ ಮೃತಪಟ್ಟಿದ್ದಾರೆ. ಬಿಬಿಎಂಪಿಯಿಂದ ಡೆಂಘೀ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಘೀ ಸಂಖ್ಯೆ ಹೆಚ್ಚಾಗುತ್ತಿದ್ದರೂ ಹಲವರು ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.
ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಕರ್ನಾಟಕ ಮುನ್ಸಿಪಲ್ ಕಾಯ್ದೆ ಪ್ರಕಾರ 50 ರು. ದಂಡ ವಿಧಿಸಲು ನಿರ್ಧರಿಸಲಾಗಿದೆ. ಆದರೂ ಎಚ್ಚೆತ್ತುಕೊಳ್ಳದಿದ್ದರೆ ದಿನಕ್ಕೆ 15 ರು. ನಂತೆ ದಂಡ ವಿಧಿಸಬಹುದು. ಡೆಂಘೀ ಕುರಿತು ಸಭೆಯಲ್ಲಿ ಕಾಯ್ದೆ ಪ್ರಕಾರ ದಂಡ ವಿಧಿಸುವಂತೆ ಆರೋಗ್ಯ ಸಚಿವರು ಸೂಚಿಸಿದ್ದಾರೆ. ಹೀಗಾಗಿ, ಬಿಬಿಎಂಪಿ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.