ಬೆಂಗಳೂರು:– ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮೆಟ್ರೋ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ
ಪ್ರಯಾಣಿಕರ ಒತ್ತಾಯದ ಮೇರೆಗೆ ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಿದೆ.
ಈ ಬಗ್ಗೆ BMRCL ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ನಾಳೆಯಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಜುಲೈ 6 ರಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಿರ್ವಹಿಸಲಿವೆ ಎನ್ನಲಾಗಿದೆ.