ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ಸೃಷ್ಟಿಸುವ ತವಕದಲ್ಲಿ ಟೀಂ ಇಂಡಿಯಾ ಉತ್ಸುಕವಾಗಿದೆ.
ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಶುಭ್ಮನ್ ಗಿಲ್ ಪಡೆ ಗೆಲುವು ಸಾಧಿಸಿದರೆ, ಅಂತಾರಾಷ್ಟ್ರೀಯ ಟಿ20ಯಲ್ಲಿ ಸತತವಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪೈಕಿ ಮೊದಲ ಸ್ಥಾನಕ್ಕೇರಲಿದೆ
ಇದುವರೆಗೆ ಬರ್ಮುಡಾ ತಂಡ ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಹೊಂದಿದೆ. ಬರ್ಮುಡಾ ತಂಡ 2021ರಿಂದ 2023ರವರೆಗೆ ಸತತ 13 ಟಿ20 ಪಂದ್ಯಗಳನ್ನು ಗೆದ್ದಿತ್ತು. ಇದಲ್ಲದೆ, ಮಲೇಷ್ಯಾ 2022 ರಲ್ಲಿ ಸತತ 13 ಪಂದ್ಯಗಳನ್ನು ಗೆದ್ದಿದೆ. ಆದರೆ ಈ ಎರಡೂ ದೇಶಗಳು ಇದುವರೆಗೆ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ
ಈ ಎರಡು ತಂಡಗಳನ್ನು ಹೊರತುಪಡಿಸಿ ಅಫ್ಘಾನಿಸ್ತಾನ ತಂಡವು 2018 ರಿಂದ 2021 ರವರೆಗೆ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. 2020 ರಿಂದ 2021 ರವರೆಗೆ, ರೊಮೇನಿಯಾ ಕೂಡ ಸತತ 12 ಟಿ20 ಪಂದ್ಯಗಳನ್ನು ಗೆದ್ದಿದೆ.
2021ರಿಂದ 2022ರವರೆಗೆ ಟೀಂ ಇಂಡಿಯಾ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿತ್ತು. ಈ ಬಾರಿಯೂ ಟೀಂ ಇಂಡಿಯಾ ಸತತ 12 ಪಂದ್ಯಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಇನ್ನೂ ಒಂದು ಪಂದ್ಯ ಗೆದ್ದರೆ ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದು ಟೆಸ್ಟ್ ಆಡುವ ರಾಷ್ಟ್ರವಾಗಲಿದೆ.
ಒಂದು ವೇಳೆ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದರೆ ಟಿ20ಯಲ್ಲಿ ಸತತ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎನಿಸಿಕೊಳ್ಳಲಿದೆ