ದೆಹಲಿ:- ಸ್ಪೈಸ್ಜೆಟ್ ಏರ್ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ, ಪ್ರಯಾಣಿಕರು 12 ಗಂಟೆಗಳಿಂದ ವಿಮಾನದಲ್ಲಿ ಲಾಕ್ ಆಗಿರುವ ಘಟನೆ ಜರುಗಿದೆ.
ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಯಲ್ಲಿ ಸಲ್ಲಿಕೆಯಾದ ಅರ್ಜಿ ಎಷ್ಟು!?.. HDK ಕೊಟ್ರೂ ಸ್ಪಷ್ಟನೆ!
ದೆಹಲಿಯಿಂದ ಬೆಂಗಳೂರಿಗೆ ಹೋಗುವ SG 8151ನ ಸ್ಪೈಸ್ಜೆಟ್ ಏರ್ಲೈನ್ಸ್ ವಿಮಾನವನ್ನು ಏರಿದ ಸುಮಾರು 60 ಪ್ರಯಾಣಿಕರು ಸತತ 12 ಗಂಟೆಗಳಿಗೂ ಅಧಿಕ ಕಾಲ ವಿಮಾನದೊಳಗೆ ಲಾಕ್ ಆಗಿ ಪರದಾಡಿದ್ದಾರೆ.
ತಾಂತ್ರಿಕ ದೋಷ ಎಂದು ನಿನ್ನೆ ಸಂಜೆಯಿಂದ ಬೆಳಗ್ಗೆ ವರೆಗೂ ದೆಹಲಿ ಏರ್ಪೋಟ್ನಲ್ಲೆ ಫ್ಲೈಟ್ ನಿಲ್ಲಿಸಲಾಗಿದ್ದು ಪ್ರಯಾಣಿಕರನ್ನು ಹೊರಗೆ ಬಿಡದೆ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಅಲ್ಲದೆ ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆಯೂ ಮಾಡದೆ ಫ್ಲೈಟ್ನಲ್ಲೇ ಕೂರಿಸಿದ್ದಾರೆ
ಸ್ಪೈಸ್ಜೆಟ್ ಏರ್ಲೈನ್ಸ್ ವಿಮಾನ ನಿನ್ನೆ ರಾತ್ರಿ 7.40ಕ್ಕೆ ದೆಹಲಿಯ ಟರ್ಮಿನಲ್ 3 ಯಿಂದ ಟೇಕಾಫ್ ಆಗಬೇಕಿತ್ತು. ಆದರೆ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಟೇಕಾಫ್ ಆಗಿಲ್ಲ.