ದೆಹಲಿ: NEET UG ಕೌನ್ಸೆಲಿಂಗ್ ಆರಂಭಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ಇಂದಿನಿಂದ ಪ್ರಾರಂಭವಾಗಬೇಕಿದ್ದ ನೀಟ್-ಯುಜಿ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ.
ತೀವ್ರ ಒತ್ತಡ ವ್ಯಕ್ತವಾದ ಬೆನ್ನಲ್ಲೇ ಕೌನ್ಸಿಲಿಂಗ್ ಮುಂದೂಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಆದರೆ ಕೌನ್ಸೆಲಿಂಗ್ನ ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.
ಪೋಷಕರೇ ಇಲ್ನೋಡಿ: ಮೊಬೈಲ್ ಚಾರ್ಜ್ ಹಾಕಲು ಹೋಗಿ ವಿದ್ಯಾರ್ಥಿ ಸಾವು
ಸುಪ್ರೀಂಕೋರ್ಟ್ನಲ್ಲಿ (Supreme Court) ವಿಚಾರಣೆ ವೇಳೆ ನೀಟ್ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಉಲ್ಲೇಖಿಸಿತ್ತು. ಸದ್ಯ ಜುಲೈ 8ರಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿರುವ ವಿಚಾರಣೆಯ ಮೇಲೂ ಸಂಬಂಧಪಟ್ಟ ಇಲಾಖೆಗಳು ಮತ್ತು ಸಚಿವಾಲಯಗಳು ಕಣ್ಣಿಟ್ಟಿವೆ