ಬೆಂಗಳೂರು:- ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Paracetamol tablets: ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ – ಸ್ಪಷ್ಟನೆ ಕೊಟ್ಟ KSMSCL!
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಇನ್ನುಳಿದಂತೆ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.