ಉತ್ತರ ಕನ್ನಡ:– ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದೆ.
ನೂತನ ಕ್ರಿಮಿನಲ್ ಕಾನೂನಿನಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR ದಾಖಲು!
ನಿರಂತರ ಮಳೆಯಿಂದ ಕುಮಟಾ ತಾಲೂಕಿನ ಕೋಟೆಗುಡ್ಡ ಗ್ರಾಮದಲ್ಲಿ ಮನೆಯೊಂದು ನೆಲಸಮವಾಗಿದೆ. ಕೋಟೆಗುಡ್ಡ ನಿವಾಸಿ ರಘು ಹಮ್ಮು ಮುಕ್ರಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದ್ದು, ಸ್ಥಳಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.
ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ನಲ್ ಹಿಲ್ ಬಳಿ ಗುಡ್ಡಕುಸಿದು ರಸ್ತೆ ಮೇಲೆ ಬಿದ್ದಿದ್ದ ಮಣ್ಣನ್ನು ಜಿಲ್ಲಾಡಳಿತ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಗುಡ್ಡ ಕುಸಿತದಿಂದ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸದ್ಯ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ