ಬೆಂಗಳೂರು:- ಸ್ವಾತಂತ್ರ್ಯ ದಿನಾಚರಣೆ ಮತ್ತು ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.
ನನ್ನ ಅಳಿಯನಿಗೆ ಅದೊಂದು ಕೊರಗಿತ್ತು: ಮಗಳ ಗಂಡನ ಬಗ್ಗೆ ಬಿಸಿ ಪಾಟೀಲ್ ಹೇಳಿದಿಷ್ಟು!
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್ಕುಮಾರ್ ಎಚ್.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.
ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು
ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಹೀಗಾಗಿ ಇನ್ನೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲಾಗುತ್ತದೆ.