ಮಂಗಳೂರು:- ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ ಆದೇಶ!
ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆ ದಕ್ಷಿಣ ಕನ್ನಡ, ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲಾ ಕಾಲೇಜ್ಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಎರಡು ತಾಲೂಕಿನ ಶಾಲಾ ಕಾಲೇಜ್ಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದ ಶರಾವತಿ ಮತ್ತು ಗುಂಡಬಾಳ ನದಿ ಉಕ್ಕಿ ಹರಿಯುತ್ತಿವೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.