ಬೆಂಗಳೂರು:- ಕರ್ನಾಟಕದಲ್ಲಿ ಇಂದು 197 ಡೆಂಗ್ಯೂ ಕೇಸ್ಗಳು ಪತ್ತೆ ಆಗಿದ್ದು, ಒಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.
ನಿಲ್ಲದ ಮಳೆಯ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ!
ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ. ಸೋಂಕಿತರ ಪೈಕಿ 46 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ.
ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು 7362 ಮಂದಿ ಡೆಂಗ್ಯೂ ಪೀಡಿತರಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ 0.09 ಇದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 95, ಬೆಂಗಳೂರು ನಗರ 4, ಶಿವಮೊಗ್ಗ 16, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 3, ಕಲಬುರಗಿ 15, ಕೊಪ್ಪಳ 1, ಚಾಮರಾಜನಗರ 6, ಮಂಡ್ಯ 33, ಉಡುಪಿ 1, ಚಿಕ್ಕಮಗಳೂರು ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ತಗುಲಿದೆ. 197 ಮಂದಿಯಲ್ಲಿ 0-1 ವರ್ಷದೊಳಗಿನವರಲ್ಲಿ 1 ಮಗುವಿಗೆ, 1 ರಿಂದ 18 ವರ್ಷಗೊಳಗಿನ 63 ಮಂದಿಗೆ ಸೋಂಕು ತಗುಲಿದೆ