ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು.ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಶೀಘ್ರದಲ್ಲೇ ಎಲ್ಲಾ ಮಾದರಿಯ ಕ್ರಿಕೆಟ್ಗೂ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಬಳಿಕ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
Virat Kohli: ಬೆಂಗಳೂರಿನ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ದಾಖಲಾಯ್ತು FIR!
ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್ಕುಮಾರ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ಕಿಂಗ್ ಕೊಹ್ಲಿ ಇನ್ನೂ ಹಲವು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಗೆದ್ದಿರುವುದು ಖುಷಿಯ ವಿಚಾರ. ನಾನು ವಿರಾಟ್ ಜೊತೆ ಮಾತನಾಡಿದ್ದೇನೆ. ಅವರು ಮುಂದಿನ ಹಲವು ವರ್ಷಗಳವರೆಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಇನ್ನೂ ಕೆಲ ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಆಡುಂವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಜ್ಕುಮಾರ್ ಶರ್ಮಾ ತಿಳಿಸಿದ್ದಾರೆ.
ಇದರೊಂದಿಗೆ 2025 ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವುದಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ ಸದ್ಯ ಟಿ20 ಅಂತಾರಾಷ್ಟ್ರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಕಾರಣ ಒಂದಷ್ಟು ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿ ಮುಂದುವರೆಯುವುದನ್ನು ಎದುರು ನೋಡಬಹುದು.