ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಕಥುವಾ ಪಟ್ಟಣದಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್ನ ಬದ್ನೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲ ಸೇನಾ ವಾಹನಗಳು ಈ ಪ್ರದೇಶದಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು ಎಂದು ಹೇಳಲಾಗಿದೆ.
ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್..!
ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜು.8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ನಮ್ಮ ಸೈನಿಕರು ಸಹ ಪ್ರತಿದಾಳಿ ನಡೆಸಿದ್ದರು. ಆದ್ರೆ ದುರದೃಷ್ಟವಶಾತ್ ಐವರು ಯೋಧರು ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆಯ ಕಾರ್ಪ್ಸ್ ಅಡಿಯಲ್ಲಿ ಈ ಪ್ರದೇಶ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು.