ಬೆಂಗಳೂರು: ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, DHO ಸೇರಿ ಹಲವರು ಪ್ರತೀ ದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯು ಹರಡದಂತೆ ಕ್ರಮ ಕೈಗೊಳ್ಳಿ ಅಗತ್ಯ ಬಿದ್ದರೇ ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
BPL Card Cancel: ಅನರ್ಹ ಬಿಪಿಎಲ್ ಕಾರ್ಡ್ ರದ್ದು : CM ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ವಿಧಾನಸೌಧದಲ್ಲಿ ಡೆಂಘಿ ನಿಯಂತ್ರಣ ಸಭೆ ನಡೆಸಿ ಅವರು ಮಾತನಾಡಿದರು, ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು. ಇದಕ್ಕೆ ಏನು ಮಾಡಬೇಕು? ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಘಿ ಹರಡದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎಂದರು.