ಗದಗ: ಲ್ಯಾಪ್ ಟ್ಯಾಪ್ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಪಾಲಕರು ತರಾಟೆಗೆ ತೆಗೆದುಕೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ನಡೆದಿದೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯದ ಯೋಜನೆಯಿಂದ ಲ್ಯಾಪ್ಟಾಪ್ ಫಲಾನುವಿಗಳ,
ಪಟ್ಟಿಯಲ್ಲಿ ಆಯ್ಕೆಯಾಗಿದ್ದ 10 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಬೇಕಿತ್ತು. ಆದ್ರೆ 10 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ವಿತರಣೆ ಮಾಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಿಮ್ರಾನ್ ಕಿನ್ನಾಳ ಗೆ ಕೈ ಬಿಟ್ಟ ಹಿನ್ನೆಲೆ ಪಟ್ಟಿಯಲ್ಲಿ ಆಯ್ಕೆಯಾಗಿದ್ದರೂ ಲ್ಯಾಪ್ಟಾಪ್ ನೀಡದಕ್ಕೆ ಶಾಸಕ ಚಂದ್ರು ಲಮಾಣಿ ಸಮ್ಮುಖದಲ್ಲಿಯೇ ಅಧಿಕಾರಿಗಳನ್ನ ಪಾಲಕರು ತರಾಟೆಗೆ ತೆಗೆದುಕೊಂಡರು.