ಬೆಂಗಳೂರು:- ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
Good News: ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ CM ಸಿದ್ದರಾಮಯ್ಯ ಸೂಚನೆ; ಯಾರು ಅರ್ಹರು!?
ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಸೇರಿ ವಿಜಯನಗರದಲ್ಲಿ ಕಡಿಮೆ ಮಳೆಯಾಗಲಿದೆ
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಬೀದರ್ ಸೇರಿ ರಾಯಚೂರು, ಧಾರವಾಡ ಮತ್ತು ಹಾವೇರಿ, ಗದಗ, ಕೊಪ್ಪಳದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಯಾದಗಿರಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಿಲಿದೆ. ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ಹಾಸನ ಜಿಲ್ಲೆಗಳಲ್ಲೂ ವಿಪರೀತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.