ಮೈಸೂರು: ಮುಡಾದಲ್ಲಿ ಸಾವಿರಾರು ಕೋಟಿ ಹಗರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಎಂಎಲ್ಸಿ ಎಚ್ ವಿಶ್ವನಾಥ್ ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ.
Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್ ಇಲ್ಲಿದೆ
ಹಾಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮಹಾರಾಜರು ಸ್ಥಾಪಿಸಿದ ಮುಡಾದ ಮಾನವನ್ನು ಎಲ್ಲರೂ ಸೇರಿಕೊಂಡು ಹರಾಜು ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸೇರಿಕೊಂಡು ಮುಡಾದ ಮಾನ ಹರಾಜು ಹಾಕಿದ್ದಾರೆ. ಅಹಿಂದ ಹೆಸರಿನಲ್ಲಿ ಓಟು ತೆಗೆದುಕೊಂಡು ಅಹಿಂದ ಸಮುದಾಯಕ್ಕೆ ಟೋಪಿ ಹಾಕುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಮುಡಾ ಹಗರಣವನ್ನು ಅಷ್ಟು ಸುಲಭವಾಗಿ ಮುಚ್ಚಿ ಹಾಕಲು ಸಾಧ್ಯವಿಲ್ಲ’ ಎಂದರು.