ನವದೆಹಲಿ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನಕ್ಕೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಈಗ ಅವರು ಜಿಲ್ಲೆಯ ಹೆಸರು ಬದಲಾಯಿಸಬಹುದು. ರಾಜ್ಯದಲ್ಲಿ ಮತ್ತೆ ನಾನು ಅಧಿಕಾರಕ್ಕೆ ಬಂದೇ ಬರುತ್ತೇನೆ, ಆಗ ನಾನು ಅವರು ಇಟ್ಟಿರೋ ಹೆಸರು ಕಿತ್ತೆಸೆಯುತ್ತೇನೆ ಎಂದು ಗುಡುಗಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ,
Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್ ಇಲ್ಲಿದೆ
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ನು ಯಾಕೆ ಮಾಡುತ್ತಿದ್ದಾರೆ ಎಂಬುದು ಅವರಿಗೇ ಗೊತ್ತಿಲ್ಲ. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ಹಣವನ್ನು ತುಂಬಿಸಿಕೊಳ್ಳಬಹುದು ಎಂಬ ಉದ್ದೇಶ ಇರಬಹುದು. ನಾನು ರಾಮನಗರದ ನಾಲ್ಕೂ ತಾಲೂಕುಗಳನ್ನು ಬೆಂಗಳೂರಿಗೆ ಸೇರಿಸುತ್ತೇನೆ. ಭೂಮಿ ಮಾರಾಟ ಮಾಡ ಬೇಡಿ ಎಂದು ಅವರು ಹೇಳಿದ್ದರು ಎಂದು ಡಿಕೆಶಿ ಹೆಸರು ಹೇಳದೇ ಕುಮಾರಸ್ವಾಮಿ ಕಿಡಿಕಾರಿದರು.