ವಿಜಯಪುರ: ಸಂಸತ್ ಭವನದ ಮುಂಭಾಗದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಶಿವಾಜಿ ಮಹಾರಾಜರ ಮೂರ್ತಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದಲ್ಲಿ ವಿವಿಧ ದಲಿತ ಪರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸಿದ್ದೇಶ್ವರ ದೇವಾಲಯದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಹಳೆ ಸಂಸತ್ ಭವನದ ಮುಂದಿನ ಮೂರ್ತಿಗಳನ್ನು ಪುನರ್ ಪ್ರತಿಷ್ಟಾಪನೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.