ಬೆಂಗಳೂರು:– ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
High Court: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಸರ್ಕಾರಕ್ಕೆ ತುರ್ತು ನೋಟಿಸ್ ಹೊರಡಿಸಿದ ಕೋರ್ಟ್!
ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.
ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್ ಏಜ್, ಸ್ಟಾರ್ ನ್ಯೂಸ್, ಆಜ್ ತಕ್, ದೂರದ ದರ್ಶನದಲ್ಲಿ ಹೀಗೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ
ಈ ಬಾರಿ ಯಾರನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು
ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ.