ಗದಗ:- ಲ್ಯಾಪ್ಟಾಪ್ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಶಾಸಕ ಚಂದ್ರು ಲಮಾಣಿ ಎದುರೇ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡಿರುವ ಘಟನೆ ಜರುಗಿದೆ.
10 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ವಿತರಣೆ ಮಾಡಲಾಗಿತ್ತು. ಓರ್ವ ವಿದ್ಯಾರ್ಥಿನಿಗೆ ಲ್ಯಾಪ್ಟಾಪ್ ಸಿಗದ ಹಿನ್ನೆಲೆ ಪೋಷಕರು ಕೋಪಗೊಂಡಿದ್ದಾರೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇರುವ ಶೈಕ್ಷಣಿಕ ಸೌಲಭ್ಯದ ಯೋಜನೆ ಇದಾಗಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಒಟ್ಟು 10 ವಿದ್ಯಾರ್ಥಿಗಳ ಫೈಕಿ ವಿದ್ಯಾರ್ಥಿನಿ ಸಿಮ್ರಾನ್ಗೆ ಕೈಬಿಡಲಾಗಿದೆ. ಹೀಗಾಗಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.