ಬೆಂಗಳೂರು :- ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
Eye Health: ನಿಮ್ಮ ಕಣ್ಣಿನ ದೃಷ್ಟಿ ಚುರುಕಾಗಲು ನಿತ್ಯ ಈ ಆಹಾರ ಸೇವಿಸಿ!
ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಲೈನ್ಮೆನ್ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದರು.
ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳೀಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು
ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಅವರು ತಿಳಿಸಿದರು
ಈಗಾಗಲೇ 1000 ಸಹಾಯಕ ಎಂಜಿನಿಯರ್ಗಳ (ಎಇ), ಕಿರಿಯ ಎಂಜಿನಿಯರ್ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಎಂಜಿನಿಯರ್ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ. ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಿಗಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ ಎಂದು ಅವರು ಹೇಳಿದರು