ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡವು ಇತಿಹಾಸ ನಿರ್ಮಿಸಿದೆ. ಜಿಂಬಾಬ್ವೆ ವಿರುದ್ಧ ಗೆದ್ದ ಬಳಿಕ ಅಂತರಾಷ್ಟ್ರೀಯ ಟಿ20ಯಲ್ಲಿ 150 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
Gold Price: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಗ್ರಾಂ ಗೋಲ್ಡ್ ಎಷ್ಟು ಗೊತ್ತಾ!?, ಇಲ್ಲಿದೆ ಇಂದಿನ ದರಪಟ್ಟಿ!
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ ತಂಡ 6 ವಿಕೆಟ್ ಕಳೆದುಕೊಂಡು 159 ರನ್ ಗಳಿಸಲಷ್ಟೇ ಶಕ್ತವಾಯಿತು.
ಟೀಂ ಇಂಡಿಯಾದ ಪರ ಯಶಸ್ವಿ ಜೈಸ್ವಾಲ್ 36 ರನ್, ನಾಯಕ ಶುಭ್ಮನ್ ಗಿಲ್ 66 ರನ್, ಅಭಿಷೇಕ್ ಶರ್ಮಾ 10 ರನ್, ರುತುರಾಜ್ ಗಾಯಕ್ವಾಡ್ 49 ರನ್ ಮತ್ತು ಸಂಜು ಸ್ಯಾಮ್ಸನ್ 12 ರನ್ ಕೊಡುಗೆ ನೀಡಿದರು. ಬೌಲಿಂಗ್ನಲ್ಲಿ ಮ್ಯಾಜಿಕ್ ಮಾಡಿದ ವಾಷಿಂಗ್ಟನ್ ಸುಂದರ್ 4 ಓವರ್ಗಳಲ್ಲಿ 15 ರನ್ ನೀಡಿ 3 ವಿಕೆಟ್ ಪಡೆದರು. ಈ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಇತಿಹಾಸ ಕೂಡ ನಿರ್ಮಿಸಿದೆ.
ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಅಂತರಾಷ್ಟ್ರೀಯ ಟಿ20ಯಲ್ಲಿ 150 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ತಂಡ ಇದುವರಗೆ 230 ಟಿ20 ಪಂದ್ಯಗಳನ್ನಾಡಿದ್ದು ಇದರಲ್ಲಿ 150 ಗೆಲುವು ದಾಖಲಿಸಿದೆ.
ಈ ವಿಷಯದಲ್ಲಿ ಪಾಕಿಸ್ತಾನ ಎರಡನೇ ಸ್ಥಾನದಲ್ಲಿದ್ದು, ಈ ತಂಡ ಆಡಿರುವ 245 ಪಂದ್ಯಗಳಲ್ಲಿ 142 ಪಂದ್ಯಗಳನ್ನು ಗೆದ್ದಿದೆ.