ಬೆಂಗಳೂರು:- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ ದಾಳಿ ಮಾಡಿ ಪರಿಶೀಲಿಸಿದ್ದಾರೆ.
11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಸಿದ್ದರಾಮಯ್ಯ: ಚುನಾವಣಾ ಆಯೋಗಕ್ಕೆ ದೂರು!
9 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಪ್ರಕರಣಗಳಲ್ಲಿ 9 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು. 100 ಅಧಿಕಾರಿಗಳ ತಂಡ ರಾಜ್ಯದ 56 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಹಾಗೂ ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.