ಬೆಂಗಳೂರು:- ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆ ತೀವ್ರಗೊಳ್ಳಬೇಕು. ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವನ್ನು ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಆ ಮೂಲಕ ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವನ್ನು ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಆ ಮೂಲಕ ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪ್ರಕರಣ ದಿನಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅದ್ರಲ್ಲೂ ಈ ಕೇಸ್ಗೆ ಇಡಿ ಎಂಟ್ರಿಯಾಗ್ತಿದ್ದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ಗೆ ಫುಲ್ ಗ್ರಿಲ್ ಮಾಡಲಾಗುತ್ತಿದೆ. ನಿನ್ನೆಯಿಂದಲೂ ಇಬ್ಬರ ಮ್ಯಾರಾಥಾನ್ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಕಾಂಗ್ರೆಸ್ ಶಾಸದ ದದ್ದಲ್ ಮಾಜಿ ಪಿಎ ಪಂಪಣ್ಣ ಇವತ್ತು ಅರೆಸ್ಟ್ ಆಗಿದ್ದಾನೆ.