ದೆಹಲಿ:– ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಡೆಂಗ್ಯೂ ಆರ್ಭಟ: ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ!, BPL ಕಾರ್ಡ್ದಾರರಿಗೆ ಗುಡ್ ನ್ಯೂಸ್!
ನಿನ್ನೆಯಷ್ಟೇ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ ಸಮನ್ಸ್ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 9ರಂದು ವಿಚಾರಣೆಗೆ ಪಟ್ಟಿ ಮಾಡಿತ್ತು.
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ