ಕ್ಯಾನ್ಸರ್ನಿಂದ ಬಳಲುತ್ತಿದ್ದ ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ.
ನಾಳೆ ಚಾಮುಂಡಿ ಬೆಟ್ಟದಲ್ಲಿ ಅಷಾಢ ವಿಶೇಷ: ಇದು ಭಕ್ತಾದಿಗಳ ಗಮನಕ್ಕೆ ತಿಳಿದಿರಲಿ!
ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.
ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.
90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.
ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.
2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದರು