ಬೆಂಗಳೂರು:- ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ CM ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ X ಮಾಡಿರುವ ಅವರು ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿಯೂ ಅಪರ್ಣಾ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಹಲವು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ರು. ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅಪರ್ಣಾ ನಿನ್ನೆ ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ ನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.