ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ಯೋನ್ಯವಾಗಿದ್ದ ಕುಟುಂಬಕ್ಕೆ ದಿಢೀರ್ ಏನಾಯ್ತು ಎಂದು ಬಂದಿದ್ದವರು ತಾವೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದರು.
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಸಿರು ಮಾರ್ಗ ಶೀಘ್ರ ವಿಸ್ತರಣೆ, ಸದ್ಯದಲ್ಲೇ ನಾಗಸಂದ್ರ – ಮಾದಾವರ ನಡುವೆ ಸಂಚಾರ
ಲಕ್ಷ್ಮಣ್ ಹಾಗೂ ಮಾಲಶ್ರೀ ಕಳೆದ ಹದಿಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಅವರಿಗೆ ಒಂದು ಹೆಣ್ಣು ಒಂದು ಗಂಡು ಮಕ್ಕಳಿದ್ದರು. ಪ್ರೀತಿಸಿ ಮದುವೆಯಾಗಿದ್ದ ಕುಟುಂಬ ಕಷ್ಟ ಪಟ್ಟು ದುಡಿಯುತ್ತಿದ್ದರು. ಲಕ್ಷ್ಮಣ್ ಆಟೋ ಓಡಿಸುತ್ತಿದ್ದರೆ, ಮಾಲಾಶ್ರೀ ಕಲ್ವಮಂಜಲಿ ಗ್ರಾಮದಲ್ಲೇ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಕಷ್ಟು ಪಟ್ಟು ದುಡಿದು ಸ್ವಂತ ಮನೆ ಕಟ್ಟಿಕೊಂಡಿದ್ದರು. ಮಕ್ಕಳನ್ನು ವೇಮಗಲ್ನಲ್ಲಿ ಖಾಸಗಿ ಶಾಲೆಗೆ ಕಳುಹಿಸುತ್ತಿದ್ದರು. ಇಷ್ಟೆಲ್ಲ ಇದ್ದರೂ ಕೂಡ ಇಂದು(ಜು.11) ಡೆತ್ ನೋಟ್ ಬರೆದಿಟ್ಟುಕೊಂಡು ಲಕ್ಷ್ಮಣ ಹಾಗೂ ಆತನ ಪತ್ನಿ ಮಾಲಾಶ್ರೀ ಇಬ್ಬರೂ ಮನೆಯ ಬಳಿಯಲ್ಲೇ ಇರುವ ಒಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.