ಭಾರತ ಕ್ರಿಕೆಟ್ ತಂಡಕ್ಕೆ ಗೌತಮ್ ಗಂಭೀರ್ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಶ್ರೀಲಂಕಾ ಪ್ರವಾಸದ ಮೂಲಕ ಹೊಸ ಕೋಚಿಂಗ್ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಆರಂಭಿಸಲಿದ್ದಾರೆ. ಇದರ ನಡುವೆ ಭಾರತ ತಂಡಕ್ಕೆ ಗೌತಮ್ ಗಂಭೀರ್ ಹೆಡ್ ಕೋಚ್ ಆಗಿರುವ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ತಮ್ಮದೇ ಆದ ಅಭಿಪ್ರಾಯಗಳನ್ನು ವ್ತಕ್ತಪಡಿಸಿದ್ದಾರೆ. ಗಂಭೀರ್ ಅಡಿಯಲ್ಲಿ ವಿರಾಟ್ ಕೊಹ್ಲಿ ಹೆಚ್ಚಿನ ಅವಧಿ ಆಡುವುದಿಲ್ಲ ಎಂಬ ಅಚ್ಚರಿ ಹೇಳಿಕೆಯನ್ನು ದಕ್ಷಿಣ ಆಫ್ರಿಕಾ ಮಾಜಿ ವೇಗಿ ಡೇಲ್ ಸ್ಟೇನ್ ನೀಡಿದ್ದಾರೆ.
ವಿರಾಟ್ ಕೊಹ್ಲಿ ಪಾಕಿಸ್ತಾನಕ್ಕೆ ಬಂದರೆ, ಅವರು ಭಾರತವನ್ನು ಮರೆಯುತ್ತಾರೆ : ಹೀಗಂದಿದ್ಯಾರು?
ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಜಂಟಿ ಆತಿಥ್ಯದಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ಬಳಿಕ ರಾಹುಲ್ ದ್ರಾವಿಡ್ ಅವರ ಹೆಡ್ ಕೋಚ್ ಅವಧಿ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಭಾರತದ ಮಾಜಿ ಆರಂಭಿಕ ಗೌತಮ್ ಗಂಭೀರ್ ಅವರನ್ನು ಹೆಡ್ ಕೋಚ್ ಆಗಿ ನೇಮಿಸಲಾಗಿದೆ. ಇದೀಗ ಗೌತಮ್ ಗಂಭೀರ್ ಅವರ ಅಡಿಯಲ್ಲಿ ಭಾರತ ತಂಡ ಯಾವ ರೀತಿಯ ಪ್ರದರ್ಶನವನ್ನು ತೋರಲಿದೆ ಎಂಬ ಬಗ್ಗೆ ತೀವ್ರ ಕುತೂಹಲವಿದೆ.
ಭಾರತ ಕ್ರಿಕೆಟ್ ತಂಡಕ್ಕೆ ಗೌತಮ್ ಗಂಭೀರ್ ಅವರು ಹೆಡ್ ಕೋಚ್ ಆಗಿ ನೇಮಕಗೊಂಡಿರುವ ಬಗ್ಗೆ ದಕ್ಷಿಣ ಆಫ್ರಿಕಾ ದಿಗ್ಗಜರಾದ ಡೇಲ್ ಸ್ಟೇನ್ ಮತ್ತು ಜಾಕ್ ಕಾಲಿಸ್ ಅವರು ಒಮ್ಮತ ವ್ಯಕ್ತಪಡಿಸಿದ್ದಾರೆ