ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತಾ ಸಮಾವೇಶದಲ್ಲಿ ಕೊಟ್ಟಿದ್ದ ಮನವಿ ಪತ್ರಗಳು ಕಸದರಾಶಿಯಲ್ಲಿ ಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು.
ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಆದರೆ ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಸಿದ್ದರಾಮಯ್ಯ ಅವರು ರೈತರಿಂದ ಸಾರ್ವಜನಿಕರಿಂದ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.