ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 17 ರ ತನಕ ಬಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸರ್ಕಾರಿ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಮಹಿಳೆಯರಿಂದ ಗೂಸಾ!
ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಜುಲೈ 17ರವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲೂ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 14 ರಿಂದ 17ರವರೆಗೆ ಮುಂಗಾರು ಮತ್ತಷ್ಟು ಚುರುಕು ಸಾಧ್ಯತೆಯಿದೆ
ಜುಲೈ 14 ಮತ್ತು 15ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜುಲೈ 16 ಮತ್ತು 18ರಂದು ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 17ರವರೆಗೆ ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಮಳೆ ಮುನ್ಸೂಚನೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.