ಭಾರತ ಕ್ರಿಕೆಟ್ ತಂಡಕ್ಕೆ ಹೆಡ್ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್, ಶ್ರೀಲಂಕಾ ಪ್ರವಾಸದ ಸೀಮಿತ ಓವರ್ಗಳ ಸರಣಿಗಳ ಮೂಲಕ ತಮ್ಮ ಕಾರ್ಯವನ್ನು ಅಧಿಕೃತವಾಗಿ ಆರಂಭಿಸಲಿದ್ದಾರೆ. 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಯಶಸ್ಸಿನ ನಂತರ, ಗಂಭೀರ್ ಅವರು ಟೀಮ್ ಇಂಡಿಯಾ ಕೋಚ್ ಹುದ್ದೆಯನ್ನು ಅಲಂಕರಿಸುವಲ್ಲಿ ಸಕ್ಸಸ್ ಆಗಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ ಔಟ್!
2007ರ ಟಿ20 ವಿಶ್ವಕಪ್ ಹಾಗೂ 2011ಎ ಏಕದಿನ ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ ಗೌತಮ್ ಗಂಭೀರ್, ಆರಂಭಿಕ ಬ್ಯಾಟ್ಸ್ಮನ್ ಆಗಿ ಹಲವು ನಿರ್ಣಾಯಕ ಪ್ರದರ್ಶನಗಳನ್ನು ತೋರಿದ್ದಾರೆ. ಅವರು ಭಾರತ ತಂಡವನ್ನು ಕೂಡ ಮುನ್ನಡೆಸಿದ್ದಾರೆ. ಒಟ್ಟು ಆರು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಗಂಭೀರ್ ಮುನ್ನಡೆಸಿದ್ದಾರೆ. ಇವರ ನಾಯಕತ್ವದ ಅಡಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ 5 ಏಕದಿನ ಪಂದ್ಯಗಳು ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಒಂದು ಏಕದಿನ ಪಂದ್ಯದಲ್ಲಿ ತಂಡವನ್ನು ಗಂಭೀರ್ ಮುನ್ನಡೆಸಿದ್ದು, ಇದರಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ.
ವಿರಾಟ್ ಕೊಹ್ಲಿ 2010 ಮತ್ತು 2011ರಲ್ಲಿ ನ್ಯೂಜಿಲೆಂಡ್ ಮತ್ತು ವೆಸ್ಟ್ಇಂಡೀಸ್ ವಿರುದ್ಧದ ಒಡಿಐ ಸರಣಿಯ ಭಾರತ ತಂಡದಲ್ಲಿ ಆಡಿದ್ದರು ಗೌತಮ್ ಗಂಭೀರ್ ನಾಯಕತ್ವದಲ್ಲಿ ರೋಹಿತ್ ಶರ್ಮಾ ಕೂಡ ಆಡಿದ್ದಾರೆ. 2011ರ ಏಕದಿನ ವಿಶ್ವಕಪ್ ಟೂರ್ನಿಯ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದ, ರೋಹಿತ್ ಶರ್ಮಾ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದರು
ಆರ್ ಅಶ್ವಿನ್ ಅವರು ತಮ್ಮ ವೃತ್ತಿ ಜೀವನದ ಆರಂಭಿಕ ಮೂರು ಏಕದಿನ ಪಂದ್ಯಗಳನ್ನು ವಿಭಿನ್ನ ನಾಯಕರ ಅಡಿಯಲ್ಲಿ ಆಡಿದ್ದರು. ಸುರೇಶ್ ರೈನಾ ನಾಯಕತ್ವದ ಅಡಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ನ್ಯೂಜಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ಏಕದಿನ ಸರಣಿಗಳಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ರವೀಂದ್ರ ಜಡೇಜಾ ಆಡಿದ್ದರು ಸೂರ್ಯಕುಮಾರ್ ಯಾದವ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಗೌತಮ್ ಗಂಭೀರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಆಡಿದ್ದರು.