ಕನ್ನಡಿಗ ಕೆ. ಎಲ್ ರಾಹುಲ್ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅತಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.
ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು. ಕೆ. ಎಲ್ ರಾಹುಲ್ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ ಸೇರುವ ನಿರೀಕ್ಷೆಯಿದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ತಂಡವೂ ಪ್ರಕಟಗೊಂಡಿಲ್ಲ. ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.
ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ.