ಬೆಂಗಳೂರು:ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ.
Excessive Sweating: ದೇಹದ ದುರ್ವಾಸನೆಯಿಂದ ಪರಿಹಾರ ಪಡೆಯಲು ಸಿಂಪಲ್ ಟಿಪ್ಸ್!
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿಸಿ ಹಂಚಿಕೊಂಡಿರುವ ಸಚಿವರು, ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಸಾರ್ವಜನಿಕರಿಂದ ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ
ಒಂದೇ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ದೂರುಗಳು ದಾಖಲಾಗಿರುವ ಕಂದಾಯ ಅಧಿಕಾರಿಗಳ ವಿವರ ನೀಡುವಂತೆ ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸುತ್ತೋಲೆ ಹೊರಡಿಸಿದ್ದಾರೆ.
ಜುಲೈ 8ರಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆ ನಡೆದಿತ್ತು. ಈ ವೇಳೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸಲು ಅಧೀನ ಅಧಿಕಾರಿ, ಸಿಬ್ಬಂದಿಗೆ ನಿರ್ದೇಶನ ನೀಡುವಂತೆ ಸಿಎಂ ಸೂಚಿಸಿದ್ದರು. ಅಲ್ಲದೆ ಕಚೇರಿಯಲ್ಲಿ ಉತ್ತಮ ಕಾರ್ಯಕ್ಷಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ಒಂದು ವೇಳೆ ಈ ದಿಸೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ, ಸಿಬ್ಬಂದಿ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಿದ್ದರು. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು ಅಥವಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸರ್ಕಾರ ಸೂಚಿಸಿದೆ.