ಉತ್ತರ ಕನ್ನಡ:– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಗಾಳಿ ಮಳೆ ಮುಂದುವರಿದಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ-ಪಿಯುಸಿತನಕ ರಜೆ ಘೋಷಿಸಲಾಗಿದೆ. ಇನ್ನು, ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್ಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
Heavy rain alert: ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲೆ ಕಾಲೇಜ್ಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಇನ್ನು ಜಿಲ್ಲೆಯಾದ್ಯಂತ ಮಳೆ ಸುರಿಯೋ ಬಗ್ಗೆ ಮಾಹಿತಿ ಇರುವುದುರಿಂದ ಯಲ್ಲಾಪುರ ಹಾಗೂ ದಾಂಡೇಲಿ ತಾಲೂಕುಗಳಿಗೂ ರಜೆ ವಿಸ್ತರಣೆ ಮಾಡಿ ಡಿಸಿ ಲಕ್ಷ್ಮಿ ಪ್ರಿಯ ಆದೇಶಿಸಿದ್ದಾರೆ.
ಅತ್ತ ಕೊಡಗು ಜಿಲ್ಲೆಯಲ್ಲಿಯೂ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಶಾಲೆಗಳಿಗೆ ಬಿಇಒ ರಜೆ ಘೋಷಿಸಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆಯ ಅಬ್ಬರ ಮುಂದುವರೆದಿದ್ದು ಬಹುತೇಕ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಇದುವರೆಗೆ 109 ಮನೆಗಳಿಗೆ ಹಾನಿಯಾಗಿದೆ. 92 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 10 ಮನೆಗಳಿಗೆ ಹೆಚ್ಚಿನ ಹಾನಿ ಸಂಭವಿಸಿದೆ
ಜಿಲ್ಲೆಯಲ್ಲಿ ಇದುವರೆಗೆ 171 ಮಂದಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ತೀವ್ರ ಮಳೆಯಿಂದಾಗಿ ತೊಂದರೆಗೊಳಗಾದ ವಿವಿಧ ಗ್ರಾಮದ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತರೆರಯುವಂತೆ ಸಂಬoಧಪಟ್ಟ ತಾಲೂಕುಗಳ ತಹಶೀಲ್ದಾರ್ಗಳಿಗೆ ಸೂಚನೆ ನೀಡಲಾಗಿದೆ.
ಅತ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಅಂತ ಹೇಳಲಾಗಿದೆ.